ಮಡಿಕೇರಿ ಪುರಸಭಾ ಕಚೇರಿ ಅವಾಂತರ ಕರವೇ ಕಾರ್ಯಕರ್ತರಿಂದ ಹೋರಾಟದ ಎಚ್ಚರಿಕೆ

ಆವರಣದಲ್ಲಿ ಇಲ್ಲದ ಮುನ್ನೆಚ್ಚರಿಕ ಕ್ರಮಗಳು ಗುಂಡಿಯಲ್ಲಿ ಬಿದ್ದ ಕಾರು

*ನಿರ್ಲಕ್ಷ್ಯದ ಪರಾಕಾಷ್ಠೆ: ಕರವೇ ಮುನ್ನೆಚ್ಚರಿಕೆ ನೀಡಿದ್ದರೂ ಪುರಸಭೆ ಹೊಂಡಕ್ಕೆ ಬಿದ್ದ ಕಾರು*

———–

ಕುಶಾಲನಗರ ಪುರಸಭೆ ಕಚೇರಿ ಆವರಣದಲ್ಲಿ ಸೃಷ್ಟಿಯಾಗಿರುವ ಅಪಾಯಕಾರಿ ಹೊಂಡಕ್ಕೆ ಇಂದು ಕಾರೊಂದು ಬಿದ್ದು ಸಿಲುಕಿಕೊಂಡಿದೆ. ಇದು ಅಧಿಕಾರಿಗಳ ಬೇಜವಾಬ್ದಾರಿತನ ಹಾಗೂ ಕಳಪೆ ಕಾಮಗಾರಿಗೆ ಹಿಡಿದ ಕೈಗನ್ನಡಿಯಾಗಿದೆ.

 

ಸುಮಾರು 7.5 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡು ಕೇವಲ ಒಂದು ವರ್ಷದೊಳಗೆ ಚರಂಡಿಯ ಕಬ್ಬಿಣದ ಗ್ರಿಲ್‌ಗಳು ಮುರಿದು ಬಿದ್ದಿವೆ. ಈ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಕಾರ್ಯಕರ್ತರು ಇತ್ತೀಚೆಗಷ್ಟೇ ಫೋಟೋ ಮತ್ತು ವಿಡಿಯೋ ದಾಖಲೆಗಳ ಸಮೇತ ಅಧಿಕಾರಿಗಳಿಗೆ ಖುದ್ದಾಗಿ ತಿಳಿಸಿ, ತಕ್ಷಣ ದುರಸ್ತಿ ಮಾಡುವಂತೆ ಎಚ್ಚರಿಸಿದ್ದರು.

ಆದರೆ, ಕಣ್ಣೆದುರೇ ಹೊಂಡವಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರಿಂದ ಇಂದು ಈ ದುರಂತ ಸಂಭವಿಸಿದೆ. ದಿನನಿತ್ಯ ನೂರಾರು ಸಾರ್ವಜನಿಕರು ಬಂದು ಹೋಗುವ ಜಾಗದಲ್ಲೇ ಈ ಅವಾಂತರವಿದ್ದು, ಮುಂದಾಗುವ ಪ್ರಾಣಾಪಾಯಕ್ಕೆ ಯಾರು ಹೊಣೆ ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪುರಸಭೆ ಆಡಳಿತ ತಕ್ಷಣವೇ ಎಚ್ಚೆತ್ತು ಗಟ್ಟಿಯಾದ ಗ್ರಿಲ್ ಅಳವಡಿಸದಿದ್ದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಕರವೇ ಸ್ವಾಭಿಮಾನಿ ಬಣ ಎಚ್ಚರಿಸಿದೆ.

ಹಾಕಿ ವಿಶ್ವಕಪ್ 2026: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಸೋಲು; 32 ವರ್ಷಗಳ ಗೆಲುವಿನ ಬರ ಮುಂದುವರಿಕೆ     |     ಭಾರತದ ಸಹನೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ: ಆಪರೇಷನ್ ಸಿಂಧೂರ್ ಕುರಿತು ಅಜಿತ್ ದೋವಲ್     |     ಬೆಂಗಳೂರಿನಲ್ಲಿ ಬೆಳಗಿನ ಜಾವ ಮಹಿಳೆ ಮೇಲೆ ದಾಳಿ; ಚಿನ್ನದ ಸರ ಕಿತ್ತು ಪರಾರಿ     |     ಧ್ವಜಾರೋಹಣದಿಂದ ವಿನಾಯಿತಿ ಕೋರಿದ ಜಮೀರ್; ವಿಜಯನಗರಕ್ಕೆ ಬಸವಂತಪ್ಪ, ಉಡುಪಿಗೆ ರಿಜ್ವಾನ್ ಅರ್ಷದ್     |     ಕಾವೇರಿ ವಿವಾದ: ಸರ್ಕಾರ ವಿಫಲ ಎಂದು ಕುಮಾರಸ್ವಾಮಿ ಆರೋಪ; ಡಿಕೆಶಿ ವಿರುದ್ಧ ವಾಗ್ದಾಳಿ     |     ಖರ್ಗೆ ಭಾಷಣದ ಬಳಿಕ ರಾಮಲೀಲಾ ವೇದಿಕೆ ‘ಶುದ್ಧೀಕರಣ’: ಉತ್ತರಾಖಂಡದಲ್ಲಿ ರಾಜಕೀಯ ಕಿಡಿ     |     ಸಂಸತ್‌ ಮುಂಗಾರು ಅಧಿವೇಶನದಲ್ಲಿ ಮತ್ತೆ ಗದ್ದಲ: ರಾಹುಲ್‌ ಗಾಂಧಿ ವಿರುದ್ಧ ಎನ್‌ಡಿಎ ಆಕ್ರೋಶ, ಸಂಸತ್‌ ಆವರಣದಲ್ಲಿ ಪ್ರತಿಭಟನಾ ಮೆರವಣಿಗೆ     |     ಮುಂಬೈನಲ್ಲಿ 33 ವರ್ಷದ ನಟಿಗೆ ಲೈಂಗಿಕ ದೌರ್ಜನ್ಯ ಆರೋಪ: 73 ವರ್ಷದ ಚಿತ್ರ ನಿರ್ದೇಶಕ ಶಕೀಲ್ ನೂರಾನಿ ಬಂಧನ     |     ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ; ಸಾವಿರಾರು ಪ್ರವಾಸಿಗರನ್ನು ಸೆಳೆಯುವ ಪುಷ್ಪ ವೈಭವ ಆರಂಭ     |     ಬರ್ತ್‌ಡೇ, ಪ್ರೀ-ವೆಡ್ಡಿಂಗ್ ಶೂಟ್‌ಗೆ ಈಗ ಬಾಡಿಗೆಗೆ ಸಿಗಲಿದೆ ‘ಅಂಬಾರಿ’ ಡಬಲ್ ಡೆಕ್ಕರ್ ಬಸ್     |    

First Report Kannada
पत्रकार बंधु भारत के किसी भी क्षेत्र से जुड़ने के लिए सम्पर्क करें