ಬೆಂಗಳೂರಿನಲ್ಲಿ ಬೆಳಗಿನ ಜಾವ ಮಹಿಳೆ ಮೇಲೆ ದಾಳಿ; ಚಿನ್ನದ ಸರ ಕಿತ್ತು ಪರಾರಿ

ಬೆಂಗಳೂರು: ನಗರದ ನೆಲಗದರನಹಳ್ಳಿಯಲ್ಲಿ ಮುಂಜಾನೆ ಒಂಟಿಯಾಗಿ ಮನೆಗೆ ತೆರಳುತ್ತಿದ್ದ ಮಹಿಳೆಯ ಮೇಲೆ ದಾಳಿ ನಡೆಸಿ ಚಿನ್ನದ ಸರ ಕಿತ್ತುಕೊಂಡು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಡೆದಿದೆ.

ಹಾಲಿನ ವ್ಯಾಪಾರ ಮುಗಿಸಿ ಬೆಳಗ್ಗೆ ಸುಮಾರು 5.15ಕ್ಕೆ ಮನೆಗೆ ಮರಳುತ್ತಿದ್ದ ವಿಜಯಮ್ಮ ಅವರನ್ನು ಬೈಕ್‌ನಲ್ಲಿ ಬಂದ ಇಬ್ಬರು ಆರೋಪಿಗಳು ಹಿಂಬಾಲಿಸಿದ್ದಾರೆ. ಬಳಿಕ ಒಬ್ಬ ಆರೋಪಿ ಮಹಿಳೆಯನ್ನು ಹಿಡಿದುಕೊಂಡು, ಮತ್ತೊಬ್ಬ ಬೈಕ್‌ನಿಂದ ಕಾಲಿನಿಂದ ಒದ್ದು ಹಲ್ಲೆ ನಡೆಸಿದ್ದಾನೆ.

ಮಹಿಳೆ ಜೋರಾಗಿ ಕೂಗಿಕೊಂಡಾಗ ಸಮೀಪದಲ್ಲಿದ್ದ ಬೀದಿ ನಾಯಿಯೊಂದು ಆರೋಪಿಗಳತ್ತ ಧಾವಿಸಿದೆ. ಈ ವೇಳೆ ದುಷ್ಕರ್ಮಿಗಳು ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಿತ್ತುಕೊಂಡು ಬೈಕ್‌ನಲ್ಲಿ ಪರಾರಿಯಾಗಿದ್ದಾರೆ.

ಆರೋಪಿಗಳು ಬೈಕ್‌ನ ನಂಬರ್ ಪ್ಲೇಟ್ ತೆಗೆದು ಕೃತ್ಯ ಎಸಗಿರುವುದು ಸಿಸಿಟಿವಿ ದೃಶ್ಯಗಳಿಂದ ತಿಳಿದುಬಂದಿದೆ. ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿಟಿವಿ ಆಧರಿಸಿ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಹಾಕಿ ವಿಶ್ವಕಪ್ 2026: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಸೋಲು; 32 ವರ್ಷಗಳ ಗೆಲುವಿನ ಬರ ಮುಂದುವರಿಕೆ     |     ಭಾರತದ ಸಹನೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ: ಆಪರೇಷನ್ ಸಿಂಧೂರ್ ಕುರಿತು ಅಜಿತ್ ದೋವಲ್     |     ಬೆಂಗಳೂರಿನಲ್ಲಿ ಬೆಳಗಿನ ಜಾವ ಮಹಿಳೆ ಮೇಲೆ ದಾಳಿ; ಚಿನ್ನದ ಸರ ಕಿತ್ತು ಪರಾರಿ     |     ಧ್ವಜಾರೋಹಣದಿಂದ ವಿನಾಯಿತಿ ಕೋರಿದ ಜಮೀರ್; ವಿಜಯನಗರಕ್ಕೆ ಬಸವಂತಪ್ಪ, ಉಡುಪಿಗೆ ರಿಜ್ವಾನ್ ಅರ್ಷದ್     |     ಕಾವೇರಿ ವಿವಾದ: ಸರ್ಕಾರ ವಿಫಲ ಎಂದು ಕುಮಾರಸ್ವಾಮಿ ಆರೋಪ; ಡಿಕೆಶಿ ವಿರುದ್ಧ ವಾಗ್ದಾಳಿ     |     ಖರ್ಗೆ ಭಾಷಣದ ಬಳಿಕ ರಾಮಲೀಲಾ ವೇದಿಕೆ ‘ಶುದ್ಧೀಕರಣ’: ಉತ್ತರಾಖಂಡದಲ್ಲಿ ರಾಜಕೀಯ ಕಿಡಿ     |     ಸಂಸತ್‌ ಮುಂಗಾರು ಅಧಿವೇಶನದಲ್ಲಿ ಮತ್ತೆ ಗದ್ದಲ: ರಾಹುಲ್‌ ಗಾಂಧಿ ವಿರುದ್ಧ ಎನ್‌ಡಿಎ ಆಕ್ರೋಶ, ಸಂಸತ್‌ ಆವರಣದಲ್ಲಿ ಪ್ರತಿಭಟನಾ ಮೆರವಣಿಗೆ     |     ಮುಂಬೈನಲ್ಲಿ 33 ವರ್ಷದ ನಟಿಗೆ ಲೈಂಗಿಕ ದೌರ್ಜನ್ಯ ಆರೋಪ: 73 ವರ್ಷದ ಚಿತ್ರ ನಿರ್ದೇಶಕ ಶಕೀಲ್ ನೂರಾನಿ ಬಂಧನ     |     ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ; ಸಾವಿರಾರು ಪ್ರವಾಸಿಗರನ್ನು ಸೆಳೆಯುವ ಪುಷ್ಪ ವೈಭವ ಆರಂಭ     |     ಬರ್ತ್‌ಡೇ, ಪ್ರೀ-ವೆಡ್ಡಿಂಗ್ ಶೂಟ್‌ಗೆ ಈಗ ಬಾಡಿಗೆಗೆ ಸಿಗಲಿದೆ ‘ಅಂಬಾರಿ’ ಡಬಲ್ ಡೆಕ್ಕರ್ ಬಸ್     |    

First Report Kannada
पत्रकार बंधु भारत के किसी भी क्षेत्र से जुड़ने के लिए सम्पर्क करें