ದರ್ಶನ್ ಕೇಸ್‌ಗೆ ಹೊಸ ಟ್ವಿಸ್ಟ್: A14 ಪ್ರದೋಷ್ ‘ಮಾಫಿ ಸಾಕ್ಷಿ’ ಅರ್ಜಿ ಸಲ್ಲಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ 14ನೇ ಆರೋಪಿ (A14) ಪ್ರದೋಷ್, ನ್ಯಾಯಾಲಯಕ್ಕೆ ಮಾಫಿ ಸಾಕ್ಷಿ (Approver) ಆಗಲು ಅರ್ಜಿ ಸಲ್ಲಿಸಿದ್ದು, ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಪ್ರಕರಣದ ಸಂಪೂರ್ಣ ಸತ್ಯವನ್ನು ನ್ಯಾಯಾಲಯದ ಮುಂದೆ ಬಹಿರಂಗಪಡಿಸಲು ಸಿದ್ಧನಿದ್ದೇನೆ ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.

ಪ್ರದೋಷ್ ಅವರನ್ನು ದರ್ಶನ್ ಸೇರಿದಂತೆ ಇತರ ಆರೋಪಿಗಳಿಂದ ಪ್ರತ್ಯೇಕ ಸೆಲ್‌ನಲ್ಲಿ ಇರಿಸಬೇಕು ಹಾಗೂ ವಿಡಿಯೊ ಕಾನ್ಫರೆನ್ಸ್ ಅಥವಾ ಪ್ರತ್ಯೇಕ ಮಾರ್ಗದ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಮನವಿ ಮಾಡಿದ್ದಾರೆ. ತನ್ನ ಮೇಲೆ ಒತ್ತಡ ಅಥವಾ ಬೆದರಿಕೆ ಉಂಟಾಗುವ ಸಾಧ್ಯತೆಯಿದೆ ಎಂದು ಅವರು ತಿಳಿಸಿದ್ದಾರೆ.

ಈ ಅರ್ಜಿಗೆ ವಿಶೇಷ ಸರ್ಕಾರಿ ಅಭಿಯೋಜಕ (SPP) ಪ್ರಸನ್ನ ಕುಮಾರ್ ಷರತ್ತುಬದ್ಧ ಒಪ್ಪಿಗೆ ಸೂಚಿಸಿದ್ದು, ದರ್ಶನ್ ಪರ ವಕೀಲರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅರ್ಜಿಯ ಪ್ರತಿಯನ್ನೂ ನೀಡಿಲ್ಲ, ಕೇವಲ ಸಾಕ್ಷಿ ಹೇಳಲು ಮುಂದಾದರೆ ಕ್ಷಮಾದಾನ ನೀಡಲು ಸಾಧ್ಯವಿಲ್ಲ ಎಂದು ವಾದಿಸಿದ್ದಾರೆ.

ಪ್ರದೋಷ್‌ಗೆ ಮಾಫಿ ಸಾಕ್ಷಿ ಸ್ಥಾನಮಾನ ದೊರೆತರೆ, ಅವರ ಹೇಳಿಕೆ ಪ್ರಕರಣದ ವಿಚಾರಣೆ ಹಾಗೂ ಇತರ ಆರೋಪಿಗಳ ವಿರುದ್ಧದ ಸಾಕ್ಷ್ಯಗಳಲ್ಲಿ ಮಹತ್ವದ ಪಾತ್ರ ವಹಿಸುವ ಸಾಧ್ಯತೆ ಇದೆ.

ಹಾಕಿ ವಿಶ್ವಕಪ್ 2026: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಸೋಲು; 32 ವರ್ಷಗಳ ಗೆಲುವಿನ ಬರ ಮುಂದುವರಿಕೆ     |     ಭಾರತದ ಸಹನೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ: ಆಪರೇಷನ್ ಸಿಂಧೂರ್ ಕುರಿತು ಅಜಿತ್ ದೋವಲ್     |     ಬೆಂಗಳೂರಿನಲ್ಲಿ ಬೆಳಗಿನ ಜಾವ ಮಹಿಳೆ ಮೇಲೆ ದಾಳಿ; ಚಿನ್ನದ ಸರ ಕಿತ್ತು ಪರಾರಿ     |     ಧ್ವಜಾರೋಹಣದಿಂದ ವಿನಾಯಿತಿ ಕೋರಿದ ಜಮೀರ್; ವಿಜಯನಗರಕ್ಕೆ ಬಸವಂತಪ್ಪ, ಉಡುಪಿಗೆ ರಿಜ್ವಾನ್ ಅರ್ಷದ್     |     ಕಾವೇರಿ ವಿವಾದ: ಸರ್ಕಾರ ವಿಫಲ ಎಂದು ಕುಮಾರಸ್ವಾಮಿ ಆರೋಪ; ಡಿಕೆಶಿ ವಿರುದ್ಧ ವಾಗ್ದಾಳಿ     |     ಖರ್ಗೆ ಭಾಷಣದ ಬಳಿಕ ರಾಮಲೀಲಾ ವೇದಿಕೆ ‘ಶುದ್ಧೀಕರಣ’: ಉತ್ತರಾಖಂಡದಲ್ಲಿ ರಾಜಕೀಯ ಕಿಡಿ     |     ಸಂಸತ್‌ ಮುಂಗಾರು ಅಧಿವೇಶನದಲ್ಲಿ ಮತ್ತೆ ಗದ್ದಲ: ರಾಹುಲ್‌ ಗಾಂಧಿ ವಿರುದ್ಧ ಎನ್‌ಡಿಎ ಆಕ್ರೋಶ, ಸಂಸತ್‌ ಆವರಣದಲ್ಲಿ ಪ್ರತಿಭಟನಾ ಮೆರವಣಿಗೆ     |     ಮುಂಬೈನಲ್ಲಿ 33 ವರ್ಷದ ನಟಿಗೆ ಲೈಂಗಿಕ ದೌರ್ಜನ್ಯ ಆರೋಪ: 73 ವರ್ಷದ ಚಿತ್ರ ನಿರ್ದೇಶಕ ಶಕೀಲ್ ನೂರಾನಿ ಬಂಧನ     |     ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ; ಸಾವಿರಾರು ಪ್ರವಾಸಿಗರನ್ನು ಸೆಳೆಯುವ ಪುಷ್ಪ ವೈಭವ ಆರಂಭ     |     ಬರ್ತ್‌ಡೇ, ಪ್ರೀ-ವೆಡ್ಡಿಂಗ್ ಶೂಟ್‌ಗೆ ಈಗ ಬಾಡಿಗೆಗೆ ಸಿಗಲಿದೆ ‘ಅಂಬಾರಿ’ ಡಬಲ್ ಡೆಕ್ಕರ್ ಬಸ್     |    

First Report Kannada
पत्रकार बंधु भारत के किसी भी क्षेत्र से जुड़ने के लिए सम्पर्क करें