ಆಗಸ್ಟ್‌ 3ಕ್ಕೆ ಬೆಂಗಳೂರಿನಲ್ಲಿ ಡಿಕೆ ಶಿವಕುಮಾರ್–ವಿಜಯ್ ಭೇಟಿ? ವಿಧಾನಸೌಧದಲ್ಲಿ ಭರ್ಜರಿ ಸಿದ್ಧತೆ

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಮಹತ್ವದ ಮಾತುಕತೆ ನಡೆಯುವ ಸಾಧ್ಯತೆ ಇದೆ. ಆಗಸ್ಟ್‌ 3ರಂದು ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಸಭೆ ನಡೆಯಲಿದೆ ಎನ್ನುವ ಮಾಹಿತಿ ಹಿನ್ನೆಲೆ, ರಾಜ್ಯ ಸರ್ಕಾರ ವಿಧಾನಸೌಧದಲ್ಲಿ ಸಕಲ ಸಿದ್ಧತೆಗಳನ್ನು ಆರಂಭಿಸಿದೆ.

ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ವಿಧಾನಸೌಧದ ಕಾನ್ಫರೆನ್ಸ್ ಹಾಲ್‌ಗೆ ನವೀಕರಣ ಕಾರ್ಯ ಭರದಿಂದ ಸಾಗುತ್ತಿದೆ. ಸಭಾಂಗಣಕ್ಕೆ ಸುಣ್ಣ-ಬಣ್ಣ ಹಚ್ಚುವುದು, ಒಳಾಂಗಣ ಅಲಂಕಾರ, ಆಸನ ವ್ಯವಸ್ಥೆ ಸೇರಿದಂತೆ ಹಲವು ಕಾಮಗಾರಿಗಳು ನಡೆಯುತ್ತಿದ್ದು, ಉನ್ನತ ಮಟ್ಟದ ಸಭೆಗೆ ತಕ್ಕಂತೆ ಸೌಲಭ್ಯಗಳನ್ನು ಸಜ್ಜುಗೊಳಿಸಲಾಗುತ್ತಿದೆ.

ಕಾವೇರಿ ನೀರಿನ ಹಂಚಿಕೆ ಕುರಿತಾಗಿ ಎರಡೂ ರಾಜ್ಯಗಳ ನಡುವೆ ಹಲವು ವರ್ಷಗಳಿಂದ ವಿವಾದ ಮುಂದುವರಿದಿರುವ ಸಂದರ್ಭದಲ್ಲಿ ಈ ಸಭೆ ವಿಶೇಷ ಮಹತ್ವ ಪಡೆದುಕೊಂಡಿದೆ. ಸಭೆಯಲ್ಲಿ ನೀರಿನ ಹಂಚಿಕೆ, ರಾಜ್ಯಗಳಲ್ಲಿ ಉಂಟಾಗಿರುವ ಬರ ಪರಿಸ್ಥಿತಿ, ಕುಡಿಯುವ ನೀರಿನ ಅಗತ್ಯ ಹಾಗೂ ರೈತರ ಹಿತಾಸಕ್ತಿಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚೆಯಾಗುವ ಸಾಧ್ಯತೆ ಇದೆ.

ಆದಾಗ್ಯೂ, ಆಗಸ್ಟ್‌ 3ರಂದು ಈ ಸಭೆ ನಡೆಯಲಿದೆ ಎಂಬ ಕುರಿತು ರಾಜ್ಯ ಸರ್ಕಾರದಿಂದ ಅಥವಾ ತಮಿಳುನಾಡು ಸರ್ಕಾರದಿಂದ ಇನ್ನೂ ಅಧಿಕೃತ ಘೋಷಣೆ ಹೊರಬಿದ್ದಿಲ್ಲ. ಅಧಿಕೃತ ಮಾಹಿತಿ ಹೊರಬರುವ ನಿರೀಕ್ಷೆಯಿದ್ದು, ರಾಜಕೀಯ ವಲಯದಲ್ಲಿ ಈ ಸಭೆ ಸಾಕಷ್ಟು ಕುತೂಹಲ ಮೂಡಿಸಿದೆ.

ಹಾಕಿ ವಿಶ್ವಕಪ್ 2026: ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಸೋಲು; 32 ವರ್ಷಗಳ ಗೆಲುವಿನ ಬರ ಮುಂದುವರಿಕೆ     |     ಭಾರತದ ಸಹನೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ: ಆಪರೇಷನ್ ಸಿಂಧೂರ್ ಕುರಿತು ಅಜಿತ್ ದೋವಲ್     |     ಬೆಂಗಳೂರಿನಲ್ಲಿ ಬೆಳಗಿನ ಜಾವ ಮಹಿಳೆ ಮೇಲೆ ದಾಳಿ; ಚಿನ್ನದ ಸರ ಕಿತ್ತು ಪರಾರಿ     |     ಧ್ವಜಾರೋಹಣದಿಂದ ವಿನಾಯಿತಿ ಕೋರಿದ ಜಮೀರ್; ವಿಜಯನಗರಕ್ಕೆ ಬಸವಂತಪ್ಪ, ಉಡುಪಿಗೆ ರಿಜ್ವಾನ್ ಅರ್ಷದ್     |     ಕಾವೇರಿ ವಿವಾದ: ಸರ್ಕಾರ ವಿಫಲ ಎಂದು ಕುಮಾರಸ್ವಾಮಿ ಆರೋಪ; ಡಿಕೆಶಿ ವಿರುದ್ಧ ವಾಗ್ದಾಳಿ     |     ಖರ್ಗೆ ಭಾಷಣದ ಬಳಿಕ ರಾಮಲೀಲಾ ವೇದಿಕೆ ‘ಶುದ್ಧೀಕರಣ’: ಉತ್ತರಾಖಂಡದಲ್ಲಿ ರಾಜಕೀಯ ಕಿಡಿ     |     ಸಂಸತ್‌ ಮುಂಗಾರು ಅಧಿವೇಶನದಲ್ಲಿ ಮತ್ತೆ ಗದ್ದಲ: ರಾಹುಲ್‌ ಗಾಂಧಿ ವಿರುದ್ಧ ಎನ್‌ಡಿಎ ಆಕ್ರೋಶ, ಸಂಸತ್‌ ಆವರಣದಲ್ಲಿ ಪ್ರತಿಭಟನಾ ಮೆರವಣಿಗೆ     |     ಮುಂಬೈನಲ್ಲಿ 33 ವರ್ಷದ ನಟಿಗೆ ಲೈಂಗಿಕ ದೌರ್ಜನ್ಯ ಆರೋಪ: 73 ವರ್ಷದ ಚಿತ್ರ ನಿರ್ದೇಶಕ ಶಕೀಲ್ ನೂರಾನಿ ಬಂಧನ     |     ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ; ಸಾವಿರಾರು ಪ್ರವಾಸಿಗರನ್ನು ಸೆಳೆಯುವ ಪುಷ್ಪ ವೈಭವ ಆರಂಭ     |     ಬರ್ತ್‌ಡೇ, ಪ್ರೀ-ವೆಡ್ಡಿಂಗ್ ಶೂಟ್‌ಗೆ ಈಗ ಬಾಡಿಗೆಗೆ ಸಿಗಲಿದೆ ‘ಅಂಬಾರಿ’ ಡಬಲ್ ಡೆಕ್ಕರ್ ಬಸ್     |    

First Report Kannada
पत्रकार बंधु भारत के किसी भी क्षेत्र से जुड़ने के लिए सम्पर्क करें